Tuesday, July 1, 2025
Homeತಾಜಾ ಸುದ್ದಿDYSP ಗಣಪತಿ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ʼಕೆ. ಜೆ. ಜಾರ್ಜ್ʼಗೆ ಬಿಗ್‌ ರಿಲೀಫ್

DYSP ಗಣಪತಿ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ʼಕೆ. ಜೆ. ಜಾರ್ಜ್ʼಗೆ ಬಿಗ್‌ ರಿಲೀಫ್

spot_img
- Advertisement -
- Advertisement -

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್‌ಗೆ ರಾಜ್ಯ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಅವರ ಪಾತ್ರವಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಇನ್ನು ಜಾರ್ಜ್‌ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಗಣಪತಿ ಅವ್ರು 2016 ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನ ಕೊಠಡಿ ಸಂಖ್ಯೆ 315ರಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಕೊಡಗಿನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ, ಅಂದಿನ ಗೃಹ ಸಚಿವ ಕೆ. ಜೆ. ಜಾರ್ಜ್‌ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ. ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನನ್ನ ಜೀವಕ್ಕೆ ಏನಾದ್ರು ಆಪಾಯವಾದ್ರೆ ಅದಕ್ಕೆ ಈ ಮೂವರೇ ನೇರ ಹೊಣೆಯಾಗುತ್ತಾರೆ ಎಂದಿದ್ದರು.

ನಡೆದ ಘಟನೆ ಏನು?
ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಗಣಪತಿ ಅವ್ರು 2016 ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನ ಕೊಠಡಿ ಸಂಖ್ಯೆ 315ರಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಕೊಡಗಿನ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿ, ತಮ್ಮ ಹಿರಿಯ ಅಧಿಕಾರಿಗಳಾದ ಪ್ರಣವ್‌ ಮೊಹಾಂತಿ ಮತ್ತು ಎ ಎಂ ಪ್ರಸಾದ್‌ ಅವರು ಹಾಗೂ ಅಂದಿನ ಗೃಹ ಸಚಿವರಾದ ಕೆ ಜೆ ಜಾರ್ಜ್‌ ಅವರು ತಮಗೆ ಕಿರುಕುಳ ನೀಡಿದ್ದಾಗಿ ಆರೋಪಿಸಿದ್ದರು. ನನ್ನ ಜೀವಕ್ಕೆ ಏನಾದ್ರು ಆಪಾಯವಾದ್ರೆ ಅದಕ್ಕೆ ಈ ಮೂವರೇ ನೇರ ಹೊಣೆಯಾಗುತ್ತಾರೆ ಎಂದಿದ್ದರು. 2016 ಜುಲೈ 7ರಂದು ಡಿವೈಎಸ್‌ಪಿ ಗಣಪತಿ ಅವರು ಸಂದರ್ಶನದ ನಂತರ ವಿನಾಯಕ ಲಾಡ್ಜ್‌ನ ತಮ್ಮ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಗಣಪತಿಯವರ ಸಾವು, ರಾಜ್ಯಾದ್ಯಂತ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಕಿಡಿಯನ್ನು ಹೊತ್ತಿಸಿತ್ತು. ಇದರ ರಾಜಕೀಯ ಲಾಭ ಪಡೆಯಲು ಬಿಜೆಪಿಯು ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸಿತ್ತು. ಹೆಚ್ಚಿದ ವಿರೋಧ ಪಕ್ಷದ ಒತ್ತಡದಿಂದ ಜಾರ್ಜ್‌ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ತನಿಖೆಗೆ ಸಹಕರಿಸಿದ್ದರು. ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಸಿಐಡಿ ಜಾರ್ಜ್‌ ಅವರಿಗೆ ಕ್ಲೀನ್‌ ಚಿಟ್‌ ನೀಡಿತ್ತು.

- Advertisement -
spot_img

Latest News

error: Content is protected !!