Friday, June 27, 2025
Homeಕರಾವಳಿಮುಡಾ ಪ್ರಕರಣ; ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು; ಸಂಸದ ಬ್ರಿಜೇಶ್‌ ಚೌಟ

ಮುಡಾ ಪ್ರಕರಣ; ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು; ಸಂಸದ ಬ್ರಿಜೇಶ್‌ ಚೌಟ

spot_img
- Advertisement -
- Advertisement -

ಮಂಗಳೂರು: ಕಾಂಗ್ರೆಸ್‌ ಸರಕಾರದ ನೇತೃತ್ವದ ರಾಜ್ಯದ ಭ್ರಷ್ಟಚಾರ ಬಣ್ಣವನ್ನು ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ದಾಳಿಯಿಂದ ಬಯಲಾಗಿದೆ. ಈ ನಿಟ್ಟಿನಲ್ಲಿ ಲೂಟಿಕೋರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಬಹಳ ಹತ್ತಿರದಲ್ಲಿರ ಎಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಹೇಳಿದ್ದಾರೆ.

ಅವರು ಮುಡಾ ಭೂಹಗರಣಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಹಲವೆಡೆ ಇ.ಡಿ. ನಡೆಸಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ನಿವೇಶನ ಹಂಚಿಕೆ ಭೂಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ರಾಜ್ಯ ಸರಕಾರದ ಅಧಿಧೀನದಲ್ಲಿರುವ ಯಾವುದೇ ತನಿಖಾ ಸಂಸ್ಥೆಯು ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಆ ಮೂಲಕ ತನ್ನ ಉತ್ತರದಾಯಿತ್ವವನ್ನು ಮರೆಮಾಚಿ ರಾಜ್ಯದ ಜನತೆಯನ್ನು ಹೇಗೆ ದಾರಿ ತಪ್ಪಿಸುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಈಗ ಈ ಪ್ರಕರಣದಲ್ಲಿ ಇ.ಡಿ. ಪ್ರವೇಶವಾದ ಕಾರಣ ಸತ್ಯಾಂಶ ಶೀಘ್ರ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಡಾದಲ್ಲಿ ನಡೆದಿರುವ ಬರೋಬ್ಬರಿ 5 ಸಾ. ಕೋಟಿ ರೂ. ಅವ್ಯವಹಾರ ನಡೆದಿರುವುದು ಸಣ್ಣ ಸಂಗತಿಯಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು.

- Advertisement -
spot_img

Latest News

error: Content is protected !!