Friday, May 3, 2024
Homeಕರಾವಳಿಉಡುಪಿದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಒಂದೊಂದು ಕೊರೋನಾ ಪ್ರಕರಣ ‌ಪತ್ತೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಒಂದೊಂದು ಕೊರೋನಾ ಪ್ರಕರಣ ‌ಪತ್ತೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗುತ್ತಿದ್ದು, ಇಂದು ಹೊಸ ಪ್ರಕರಣಗಳ ಸಂಖ್ಯೆ ನೂರಕ್ಕಿಂತ ಕೆಳಗೆ ಇಳಿದಿದೆ.

ಇಂದು ರಾಜ್ಯದಲ್ಲಿ ಒಟ್ಟು 98 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇಂದು 149 ಮಂದಿ‌ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ತಲಾ ಒಂದೊಂದು ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂರು ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 16 ಆಗಿವೆ.

ಉಡುಪಿ ಜಿಲ್ಲೆಯಲ್ಲಿ ಒಟ್ಟು 2 ಸಕ್ರೀಯ ಪ್ರಕರಣಗಳು ಇವೆ. ಇಂದು ಪತ್ತೆಯಾದ ಹೊಸ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 89, ಮೈಸೂರು ಜಿಲ್ಲೆಯಲ್ಲಿ 3, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬಳ್ಳಾರಿ, ತುಮಕೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತಲಾ ಒಂದು ಸೇರಿವೆ.

- Advertisement -
spot_img

Latest News

error: Content is protected !!