- Advertisement -
![]()
- Advertisement -
ಮುಂಬೈ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೊಯ್ನಾ ಅಣೆಕಟ್ಟು ಪ್ರದೇಶದಲ್ಲಿ 2.6 ತೀವ್ರತೆಯ ಭೂಕಂಪ ಸಂಭವಿಸಿದೆ.
ಮಂಗಳವಾರ ಬೆಳಿಗ್ಗೆ 7.16 ಕ್ಕೆ ಭೂಕಂಪ ಸಂಭವಿಸಿದ್ದು, ಕೊಯ್ನಾ ಜಲಾಶಯದಿಂದ 8 ಕಿ.ಮೀ ದೂರದಲ್ಲಿ ಅದರ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ. ಭೂಕಂಪನದಿಂದಾಗಿ ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟವಾಗಿಲ್ಲ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದರು.
- Advertisement -


