- Advertisement -
![]()
- Advertisement -
ಮುಂಬೈ: ಮುಂಬೈಯಿಂದ ಉತ್ತರಕ್ಕೆ 102 ಕಿ.ಮೀ ದೂರದಲ್ಲಿರುವ ಪಾಲ್ಗರ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ರಿಕ್ಟರ್ ಸ್ಕೇಲ್‌ನಲ್ಲಿ 3.5 ರಷ್ಟಿರುವ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಇಂದು ಸಂಭವಿಸಿದ ಭೂಕಂಪದಿಂದ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ಯಾವುದೇ ವರದಿ ಬಂದಿಲ್ಲ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಶನಿವಾರ ನಾಲ್ಕು ಕಡಿಮೆ ತೀವ್ರತೆಯ ಭೂಕಂಪಗಳು ಸಂಭವಿಸಿವೆ. ಶುಕ್ರವಾರ ರಾತ್ರಿಯಿಂದ ಶನಿವಾರ ಮುಂಜಾನೆ ಕಂಪನ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
- Advertisement -


