- Advertisement -
- Advertisement -
ಮುಂಬೈ : ಮಹಾರಾಷ್ಟ್ರದಲ್ಲಿ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ.
ಮಹಾರಾಷ್ಟ್ರದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯಬೇಕು ಎಂದು ಸಿಎಂ ಉದ್ಧವ್ ಠಾಕ್ರೆ ಬೇಡಿಕೆ ಇಟ್ಟ ಬೆನ್ನಲ್ಲೇ ಚುನಾವಣಾ ಆಯೋಗ ಹಸಿರು ನಿಶಾನೆ ತೋರಿಸಿದೆ. ಈ ಮೂಲಕ ಪರಿಷತ್ ಸದಸ್ಯರಾಗಿ ತಮ್ಮ ಸಿಎಂ ಸ್ಥಾನ ಭದ್ರಪಡಿಸಿಕೊಳ್ಳಲು ಸಜ್ಜಾಗಿದ್ದಾರೆ.
ಚುನಾವಣಾ ಆಯೋಗವು ಮಹಾರಾಷ್ಟ್ರದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಸಲು ಹಸಿರು ನಿಶಾನೆ ತೋರಿಸಿದ್ದು, ಚುನಾವಣೆ ನಡೆಸುವ ವೇಳೆ ಅಗತ್ಯವಾದ ಮುನ್ನೆಚ್ಚರಿಕೆ ಹಾಗೂ ಮಾರ್ಗದರ್ಶನಗಳನ್ನು ಬಳಸಿಕೊಳ್ಳುವಂತೆ ಸರ್ಕಾರಕ್ಕೆ ಆಯೋಗ ಸೂಚನೆ ನೀಡಿದೆ ಎನ್ನಲಾಗಿದೆ.
- Advertisement -