- Advertisement -
- Advertisement -
ಬೆಂಗಳೂರು: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಸೇರಿದಂತೆ ವಿವಿಧೆಡೆ ಜಾರಿ ನಿರ್ದೇಶನಾಲಯ (ಈ.ಡಿ.) ಅಧಿಕಾರಿಗಳ ಶೋಧ ಕಾರ್ಯ ನಡೆದಿದ್ದು, ಅರೆಸೇನಾ ಪಡೆಯ ಭದ್ರತೆಯಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದು, ₹3 ಕೋಟಿಗೂ ಅಧಿಕ ನಗದನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ತಡರಾತ್ರಿ 2 ಗಂಟೆಯವರೆಗೂ ವಿಚಾರಣೆ ನಡೆಸಿದ್ದ ಈ.ಡಿ. ಅಧಿಕಾರಿಗಳು, ಗುರುವಾರ ಬೆಳಗ್ಗೆ 6 ಗಂಟೆಯಿಂದ ಮತ್ತೆ ಶೋಧ ಕಾರ್ಯ ಆರಂಭಿಸಿ, ಸಂಜೆವರೆಗೂ ದಾಖಲೆಗಳ ಪರಿಶೀಲನೆ ನಡೆಸಿದರು.
ಬೆಂಗಳೂರು, ಬೆಳಗಾವಿ ಹಾಗೂ ಗೋಕಾಕ್‌ನಲ್ಲಿ ಎರಡು ದಿನಗಳ ಕಾಲ ಒಟ್ಟು 18 ಸ್ಥಳಗಳಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ನಿವಾಸದಿಂದ ₹1.20 ಕೋಟಿ ಸೇರಿದಂತೆ, ಸತೀಶ್ ಜಾರಕಿಹೊಳಿ ಅವರ ನಿವಾಸದಿಂದ ₹3 ಕೋಟಿಗೂ ಅಧಿಕ ನಗದನ್ನು ಜಪ್ತಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
- Advertisement -


