Monday, May 6, 2024
Homeಕರಾವಳಿಕಡಬ: ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರು ಪಾಲು

ಕಡಬ: ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರು ಪಾಲು

spot_img
- Advertisement -
- Advertisement -

ಕಡಬ: ಕಡಬ ತಾಲೂಕಿನ ಎಡಮಂಗಲದ ದೊಳ್ತಿಲದಲ್ಲಿ ಹರಿಯುತ್ತಿರುವ ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

ನೀರುಪಾಲಾದ ಯುವಕನನ್ನು ದೊಳ್ತಿಲದ ರಾಮಣ್ಣ ನಾಯ್ಕ್ ಅವರ ಪುತ್ರ ಪ್ರಕಾಶ್ (25ವ) ಎಂದು ಗುರುತಿಸಲಾಗಿದೆ.

ಹಲವು ಯುವಕರು ಗುರುವಾರ ರಾತ್ರಿ ಕುಮಾರಧಾರ ನದಿಗೆ ಮೀನು ಹಿಡಿಯಲು ಹೋಗಿದ್ದರು. ಮೀನು ಹಿಡಿಯಲು ಬಿಟ್ಟಿದ್ದ ಬಲೆಯನ್ನು ಈಜಿ ತರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಪುತ್ತೂರು ಅಗ್ನಿಶಾಮಕ ದಳದ ಅಧಿಕಾರಿಗಳು, ಬೆಳ್ಳಾರೆ ಪೋಲೀಸರು ಭೇಟಿ ನೀಡಿ ಶೋಧ ಕಾರ್ಯ ನಡೆಸಿದ್ದಾರೆ. ಇಂದು ಬೆಳಿಗ್ಗೆ ಯುವಕ ನಾಪತ್ತೆಯಾದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.

ಕಡಬ ತಹಶೀಲ್ದಾರರು, ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!