Wednesday, June 3, 2026
Homeತಾಜಾ ಸುದ್ದಿಜೂನ್ 21 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಯೋಗ ದಿನಾಚರಣೆಗೆ ಶಿಕ್ಷಣ ಇಲಾಖೆ ಸೂಚನೆ

ಜೂನ್ 21 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಯೋಗ ದಿನಾಚರಣೆಗೆ ಶಿಕ್ಷಣ ಇಲಾಖೆ ಸೂಚನೆ

- Advertisement -
- Advertisement -

ಬೆಂಗಳೂರು: ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಯೋಗ ದಿನಾಚರಣೆ ಆಚರಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

ಈ ಸಂಬಂಧ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ರವಾನಿಸಲಾಗಿದೆ.

ಜೂನ್ 21 ರಂದು ಎಲ್ಲಾ ಶಾಲೆಗಳಲ್ಲಿ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್ ಡಿಎಂಸಿ ಸದಸ್ಯರು, ಶಿಕ್ಷಕರು ಹಾಗೂ ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನಾಚರಣೆ ಆಚರಿಸಲು ತಿಳಿಸಲಾಗಿದೆ.

ಜೂನ್ 21 ರಂದು ಅರ್ಧ ದಿನದ ಶಾಲೆ ನಡೆಸಲು ಸೂಚಿಸಲಾಗಿದ್ದು, ಅಂದು ದಿನದ ಮೊದಲ ಒಂದೂವರೆ ಗಂಟೆಯ ಅವಧಿಯಲ್ಲಿ ಯೋಗಾಸನಗಳ ಅಭ್ಯಾಸ ಹಾಗೂ ಪ್ರದರ್ಶನಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ.

ಈ ದಿನದ ಪಾಠಗಳನ್ನು ಜೂನ್ 25 ರಂದು ಪೂರ್ಣ ದಿನದ ಶಾಲೆ ನಡೆಸಲು ತಿಳಿಸಲಾಗಿದೆ.

- Advertisement -

Latest News

error: Content is protected !!