Monday, April 29, 2024
Homeತಾಜಾ ಸುದ್ದಿಎಸ್ಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗೆ ಸಜ್ಜಾದ ಶಿಕ್ಷಣ ಇಲಾಖೆ

ಎಸ್ಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗೆ ಸಜ್ಜಾದ ಶಿಕ್ಷಣ ಇಲಾಖೆ

spot_img
- Advertisement -
- Advertisement -

ಬೆಂಗಳೂರು: ಮಾರ್ಚ್ 9ರಿಂದ ಏಪ್ರಿಲ್ 15ರವರೆಗೆ ನಡೆಯಲಿರುವ ಎಸ್ಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಅಗತ್ಯ ವ್ಯವಸ್ಥೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಾಡಿಕೊಂಡಿದೆ.

ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತದೆ. ಸಿಸಿ ಕ್ಯಾಮೆರಾ ಕಣ್ಗಾವಲು ಇರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡಲಾಗುತ್ತದೆ. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ. ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳುವುದು ಸೇರಿದಂತೆ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ.

ಹಿಂದಿನ ವರ್ಷಗಳಲ್ಲಿ ಪರೀಕ್ಷಾ ಅಕ್ರಮ ವರದಿಯಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಮೊಬೈಲ್‌ಫೋನ್, ಸ್ಮಾರ್ಟ್‌ ವಾಚ್, ಇಯರ್‌ ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿಸಲಾಗುತ್ತದೆ. ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಗೋಡೆ ಗಡಿಯಾರದ ವ್ಯವಸ್ಥೆಯನ್ನು ಮಾಡಲಾಗುತ್ತದೆ.

ಜಾಲತಾಣಗಳಲ್ಲಿ ವದಂತಿಗಳನ್ನು ಹಬ್ಬಿಸುವ ಕಿಡಿಗೇಡಿಗಳ ಮೇಲೆ ಸೈಬರ್ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಇನ್ನಿತರ ತಂಡಗಳು ವಿಶೇಷ ನಿಗಾ ಇರಿಸಲಿವೆ. ಈ ಸಂಬಂಧ ಪೊಲೀಸರು, ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಂಯೋಜನೆ, ಸಹಯೋಗದಿಂದ ಕಾರ್ಯ ನಿರ್ವಹಿಸಲಿವೆ.

ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳು 24/7 ಪೊಲೀಸ್ ಭದ್ರತೆ ಮತ್ತು ಸಿಸಿ ಕ್ಯಾಮೆರಾ ನಿಗಾದಲ್ಲಿರುತ್ತವೆ. ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ ಮತ್ತು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಅಧೀಕ್ಷಕರು ಮಾತ್ರ ಕ್ಯಾಮೆರಾ ಸೌಲಭ್ಯ ಇಲ್ಲದ ಬೇಸಿಕ್ ಮೊಬೈಲ್‌ಫೋನ್ ಬಳಕೆಗೆ ಅನುಮತಿ ಇರುತ್ತದೆ.

ದ್ವಿತೀಯ ಪಿಯುಸಿಗೆ 1,109 ಒಟ್ಟು ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇನ್ನು ಎಸ್ಎಸ್ಎಲ್‌ಸಿ‌ ಪರೀಕ್ಷೆಯಲ್ಲಿ ಒಟ್ಟು 3,307 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 8,69,490 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

- Advertisement -
spot_img

Latest News

error: Content is protected !!