Saturday, June 28, 2025
HomeUncategorizedಶಾಲಾ ಆರಂಭದ ಬಗ್ಗೆ ಶಿಕ್ಷಣ ಸಚಿವರಿಂದಲೇ ಅಧಿಕೃತ ಮಾಹಿತಿ

ಶಾಲಾ ಆರಂಭದ ಬಗ್ಗೆ ಶಿಕ್ಷಣ ಸಚಿವರಿಂದಲೇ ಅಧಿಕೃತ ಮಾಹಿತಿ

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ಪ್ರತಾ ದಿನೇ ದಿನೇ ಏರಿಕೆಯಾಗುತ್ತಿರುವುದರಿಂದ ತಡವಾಗಿ ಶಾಲೆಯನ್ನು ಆರಂಭಿಸಬೇಕು ಎಂಬ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಇದೀಗ ಈ ಬಗ್ಗೆ ಶಿಕ್ಷಣ ಸಚಿವರೇ ಸ್ಪಷ್ಟನೆ ನೀಡಿದ್ದಾರೆ.

ಶಾಲೆ ಆರಂಭದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಾಲೆ ರಜೆ ವಿಸ್ತರಣೆ ಮಾಡಬೇಕು ಎಂಬ ಬಗ್ಗೆ ಕೆಲ ಶಾಸಕರು ಆಗ್ರಹ ಮಾಡಿದ್ದಾರೆ ಎಂಬ ಮಾಹಿತಿ ಬಂದಿದೆ. ಆದರೆ ಈ ಬಾರಿ ಕಲಿಕಾ ಚೇತರಿಕೆ ಕಾರ್ಯಕ್ರಮ ರೂಪಿಸಿ 15 ದಿನ ಮೊದಲೇ ಶಾಲೆ ಆರಂಭಿಸಲು ನಿರ್ಧರಿಸಲಾಗಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

ವಿಧಾನಪರಿಷತ್ ಜೆಡಿಎಸ್ ಸದಸ್ಯ ಬೋಜೇಗೌಡ ಸೇರಿದಂತೆ ಕೆಲ ಮೇಲ್ಮನೆ ಸದಸ್ಯರು ಈ ಬಾರಿ ಬಿಸಿಲ ಬೇಗೆಯ ತಾಪಪಾನ ಹೆಚ್ಚಾಗಿದ್ದು, ಶಾಲೆಗಳನ್ನು ಒಂದು ತಿಂಗಳು ಕಾಲ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಹುಟ್ಟುಹಾಕಿತ್ತು. ಇದೀಗ ಸಚಿವರೇ ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

- Advertisement -
spot_img

Latest News

error: Content is protected !!