Tuesday, June 30, 2026
Homeಇತರಎಸ್ಸೆಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಶಿಕ್ಷಣ ಸಚಿವ ಸುರೇಶ್...

ಎಸ್ಸೆಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

- Advertisement -
- Advertisement -

ಬೆಂಗಳೂರು : ಎಷ್ಟೆಲ್ಲಾ ಗೊಂದಲ, ಭಯ, ಆತಂಕದ ನಡುವೆ ಈ ವರ್ಷ ರಾಜ್ಯದ ಎಸ್ಸೆಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದಾರೆ ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಕೆಲವು ಎಸ್ಸೆಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲೇ ಕೊರೊನಾಗೂ ಕೂಡ ತುತ್ತಾದ್ರು. ಕೊನೆಗೂ ಇವತ್ತು ಎಸ್ಸೆಸೆಲ್ಸಿ ಪರೀಕ್ಷೆ ಮುಕ್ತಾಯಗೊಂಡಿದೆ.

ಎಸ್ಸೆಸೆಲ್ಸಿ ಪರೀಕ್ಷೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ  ಎಸ್ಸೆಸೆಲ್ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಕೂಡ ಹಾಕಿದ್ದಾರೆ. ಎಸ್ಸೆಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ ಮಕ್ಕಳಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ

- Advertisement -

Latest News

error: Content is protected !!