Friday, June 26, 2026
Homeತಾಜಾ ಸುದ್ದಿಮಾರ್ಚ್ ಏಪ್ರಿಲ್ ನಲ್ಲಿ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲ್ಲ: ಶಿಕ್ಷಣ ಸಚಿವ ಸುರೇಶ್...

ಮಾರ್ಚ್ ಏಪ್ರಿಲ್ ನಲ್ಲಿ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

- Advertisement -
- Advertisement -

ಬೆಂಗಳೂರು: ಕೊರೊನಾ ಆತಂಕದ ಮಧ್ಯೆಯೂ ಬರೋಬ್ಬರಿ 9 ತಿಂಗಳ ಬಳಿಕ ಇಂದು  ಶಾಲಾ-ಕಾಲೇಜು ಪುನರಾರಂಭಗೊಂಡಿದೆ. ಬೋರ್ಡ್ ಪರೀಕ್ಷೆಗಳಾಗಿರುವಂತ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಇಂದಿನಿಂದ ಆರಂಭಗೊಂಡಿವೆ. ಆದರೆ ಪ್ರತಿವರ್ಷದಂತೆ ಮಾರ್ಚ್ ತಿಂಗಳಿನಲ್ಲಿ ನಡೆಯುವ ಪರೀಕ್ಷೆಯ ಬಗ್ಗೆ ಮಹತ್ವದ ಮಾಹಿತಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು, ವಿದ್ಯಾಗಮ ತರಗತಿಗಳ ಆಧಾರದ ಮೇಲೆ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಆದ್ರೇ ವಿದ್ಯಾರ್ಥಿಗಳಿಗೆ ಪರೀಕ್ಷೆಗೂ ಮುನ್ನಾ ಸಾಕಷ್ಟು ಸಮಯ ಕೊಡುತ್ತೇವೆ. ಅಲ್ಲದೇ ಇಂದಿನಿಂದ ಶಾಲಾ-ಕಾಲೇಜು ಆರಂಭಗೊಳ್ಳುತ್ತಿರುವುದರಿಂದ ಮಾರ್ಚ್ ತಿಂಗಳಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೂ ನೆಮ್ಮದಿಯ ಸುದ್ದಿಯನ್ನು ನೀಡಿದ್ದಾರೆ.

- Advertisement -

Latest News

error: Content is protected !!