Monday, June 8, 2026
Homeಕರಾವಳಿಉಡುಪಿಉಡುಪಿ, ದ.ಕ. ಸೇರಿ 8 ಜಿಲ್ಲೆಗಳಲ್ಲಿ ಜುಲೈ ತಿಂಗಳ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನಕ್ಕೆ...

ಉಡುಪಿ, ದ.ಕ. ಸೇರಿ 8 ಜಿಲ್ಲೆಗಳಲ್ಲಿ ಜುಲೈ ತಿಂಗಳ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನಕ್ಕೆ ವಿನಾಯಿತಿ

- Advertisement -
- Advertisement -

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ 8 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನಕ್ಕೆ ವಿನಾಯಿತಿ ನೀಡಲಾಗಿದೆ.‌

ಜುಲೈ ತಿಂಗಳ ಅಭಿಯಾನಕ್ಕೆ ವಿನಾಯಿತಿ ನೀಡಿ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಜುಲೈ 16 ರಂದು ನಡೆಯಬೇಕಿರುವ ಅಭಿಯಾನಕ್ಕೆ ವಿನಾಯಿತಿ ನೀಡಲಾಗಿದೆ.

ಮಳೆ ಪೀಡಿತ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಸಂತ್ರಸ್ತರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ, ನಷ್ಟ ಅಂದಾಜು ಮಾಡುವ ಕಾರ್ಯಗಳಲ್ಲಿ ತೊಡಗಬೇಕಾಗಿರುವುದರಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನ ನಡೆಸಲು ತೊಂದರೆಯಾಗುವ ಕಾರಣ ವಿನಾಯಿತಿ ನೀಡಲಾಗಿದೆ. ‌

ಉಳಿದ ಜಿಲ್ಲೆಗಳಲ್ಲಿ ಯಥಾ ಪೂರ್ವದಂತೆ ಅಭಿಯಾನ ನಡೆಸಲು ಸೂಚನೆ ನೀಡಲಾಗಿದೆ.

- Advertisement -

Latest News

error: Content is protected !!