Thursday, June 4, 2026
Homeಕರಾವಳಿಎಕ್ಕಾರಿನಲ್ಲಿ ಯುವಕನ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಐವರು ಆರೋಪಿಗಳ ಬಂಧನ

ಎಕ್ಕಾರಿನಲ್ಲಿ ಯುವಕನ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಐವರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು: ನಿನ್ನೆ ಮೂಡಬಿದ್ರೆ ತಾಲೂಕಿನ ಕಟೀಲು ಸಮೀಪದ ಎಕ್ಕಾರು ದೇವರಗುಡ್ಡೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಜಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ದೀಪೇಶ್, ಸುಹಾಸ್ ಶೆಟ್ಟಿ, ಪ್ರಶಾಂತ್ ಯಾನೆ ಪಚ್ಚು ಮೋಕ್ಷಿತ್ ಮತ್ತು ಧನರಾಜ್ ಬಂಧಿತರು. ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಅಕ್ರಮ ಮರಳುಗಾರಿಕೆಯ ಹಿನ್ನಲೆಯಲ್ಲಿ ಈ ಹತ್ಯೆ ನಡೆದಿದ್ದೆಂದು ಮೇಲ್ನೋಟಕ್ಕೆ ಕಂಡುಬಂದಿದ್ದು, ಪೊಲೀಸರು ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರಕಾಯುಧಗಳು ಹಾಗೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. .

ಸೋಮವಾರ ತಂಡವೊಂದು ದಾಳಿ ನಡೆಸಿದ ಪರಿಣಾಮ ಮಂಗಳೂರಿನ ಮರಕಡ ನಿವಾಸಿ ಕೀರ್ತನ್(20) ಮೃತಪಟ್ಟಿದ್ದು ನಿತಿನ್(20), ಮಣೇಶ್(20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಇನ್ನು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!