Wednesday, June 24, 2026
Homeಕರಾವಳಿರಸ್ತೆ ಅಪಘಾತದಲ್ಲಿ ಗಾಯಗೊಂಡ ಹಿರಿಯ ಕಾರು ಚಾಲಕ ನಿಧನ

ರಸ್ತೆ ಅಪಘಾತದಲ್ಲಿ ಗಾಯಗೊಂಡ ಹಿರಿಯ ಕಾರು ಚಾಲಕ ನಿಧನ

- Advertisement -
- Advertisement -

ಬಂಟ್ವಾಳ: ಇಲ್ಲಿನ ಹಿರಿಯ ಕಾರು ಚಾಲಕರೋರ್ವರು ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡು, ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಅ.29 ರ ಮಂಗಳವಾರ ತುಂಬೆಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ, ಅಂಬಾಸಿಡರ್ ಕಾರು ಚಾಲಕ ಬೋಜ ಮೂಲ್ಯ (62) ಎನ್ನಲಾಗಿದೆ. 

ಘಟನೆಯ ವಿವರ: ಮನೆಗೆ ಕೋಳಿ ಮಾಂಸ ಕೊಂಡು ಹೋಗುವ ಉದ್ದೇಶದಿಂದ ಅ.11 ರಂದು ರಾತ್ರಿ 7 ರ ಸುಮಾರಿಗೆ ಅವರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾರು ನಿಲ್ಲಿಸಿ ತಲಪಾಡಿ- ಬೈಕಂಪಾಡಿ ಚಿಕನ್ ಸ್ಟಾಲ್ ಕಡೆ ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿತ್ತು. ಈ ಪರಿಣಾಮ ಕಾಲಿಗೆ ಗಾಯವಾಗಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ. 12 ರಂದು ಅಪಘಾತದ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. 7 ದಿನಗಳ ನಂತರ ಇವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಗೊಂಡು ಮನೆಗೆ ತೆರಳಿದ್ದರು.

ಇದೀಗ 19 ದಿನಗಳ ಬಳಿಕ ಮನೆಯಲ್ಲಿ ಇವರಿಗೆ ಉಸಿರಾಟದ ತೊಂದರೆ ಕಂಡು ಬಂದಿದ್ದು ಇವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಅ.29) ಮೃತಪಟ್ಟ ಬಗ್ಗೆ ಅವರ ಕುಟುಂಬದ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಅಪಘಾತ ಪ್ರಕರಣದ ಬಗ್ಗೆ ಈಗಾಗಲೇ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್.ಐ. ಸುತೇಶ್ ಅವರು ಮರಣೋತ್ತರ ಪರೀಕ್ಷೆ ವೇಳೆ ಹಾಜರಿದ್ದರು.

- Advertisement -

Latest News

error: Content is protected !!