ಮಂಗಳೂರು; ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ವೃದ್ಧನನ್ನು ಅರೆಸ್ಟ್ ಮಾಡಿರುವ ಘಟನೆ ಸುರತ್ಕಲ್ ನ ಚೇಳಾಯರು ಎಂಬಲ್ಲಿ ನಡೆದಿದೆ. ಸುರತ್ಕಲ್ ಚೇಳಾಯರು ನಿವಾಸಿ ಸುಂದರ ಪೂಜಾರಿ (60) ಬಂಧಿತ.
14 ವರ್ಷದ ಅಪ್ರಾಪ್ತ ಬಾಲಕಿ ಟ್ಯೂಶನ್ ಮುಗಿಸಿ ಬಸ್‌ನಲ್ಲಿ ಬಂದಿಳಿದು ತನ್ನ ಮನೆಗೆ ಒಳ ರಸ್ತೆಯಾಗಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕೆಯ ಎದುರು ಬದಿಯಿಂದ ಬಂದ ಅಪರಿಚಿತ ವ್ಯಕ್ತಿ ಆಕೆಯ ಕೈಹಿಡಿದು ಮಾತನಾಡಿಸಿದ ಬಳಿಕ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಘಟನೆ 2025ರ ಅಕ್ಟೋಬರ್ ತಿಂಗಳಿನಲ್ಲಿ ನಡೆದಿದ್ದು, ಆ ಬಳಿಕ ಬಾಲಕಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಆದ್ದರಿಂದ ಆಕೆಯ ತಾಯಿ ವೈದ್ಯರ ಬಳಿ ಕರೆದೊಯ್ದು ತಪಾಸಣೆಗೆ ಒಳಪಡಿಸಿದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರ ತಿಳಿದು ಬಂದಿದೆ ಎಂದು ಪೊಲೀಸರು ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಸಂತ್ರಸ್ತ ಬಾಲಕಿ ನೀಡಿದ ದೂರಿನಂತೆ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


