Sunday, August 2, 2026
Homeಕರಾವಳಿಮಂಗಳೂರುವಿಟ್ಲ: ವೃದ್ಧ ನಾಪತ್ತೆಯಾಗಿ ಚರಂಡಿಯಲ್ಲಿ ಪತ್ತೆಯಾಗಿದ್ದ ಪ್ರಕರಣ; ಚಿಕಿತ್ಸೆ ಫಲಿಸದೆ ಸಾವು

ವಿಟ್ಲ: ವೃದ್ಧ ನಾಪತ್ತೆಯಾಗಿ ಚರಂಡಿಯಲ್ಲಿ ಪತ್ತೆಯಾಗಿದ್ದ ಪ್ರಕರಣ; ಚಿಕಿತ್ಸೆ ಫಲಿಸದೆ ಸಾವು

- Advertisement -
- Advertisement -

ವಿಟ್ಲ: ಮೂರು ದಿನಗಳಿಂದ ನಾಪತ್ತೆಯಾಗಿ, ಅಡಿಕೆ ತೋಟದ ಚರಂಡಿಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾರೆ.

ವಿಟ್ಲಪಡ್ನೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಫಲ್ಯ (75) ಮೃತಪಟ್ಟವರು.

ಗಿರಿಯಪ್ಪ ಸಫಲ್ಯ ಅವರು ಕಳೆದ ಮೂರು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಸಾರ್ವಜನಿಕರು ಹುಡುಕಾಟ ನಡೆಸಿದಾಗ, ಶುಕ್ರವಾರ ಬೆಳಿಗ್ಗೆ ಸ್ಥಳೀಯ ಅಡಿಕೆ ತೋಟವೊಂದರ ಚರಂಡಿಯಲ್ಲಿ ಅವರು ಬಿದ್ದಿರುವುದು ಪತ್ತೆಯಾಗಿತ್ತು.

ಕೂಡಲೇ ಅವರನ್ನು ರಕ್ಷಿಸಿ ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಶನಿವಾರ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

- Advertisement -

Latest News

error: Content is protected !!