Wednesday, June 24, 2026
Homeಕರಾವಳಿಕಸ್ತೂರಿ ರಂಗನ್ ವರದಿ ಜಾರಿ ವಿಚಾರ; ಬೆಂಗಳೂರಿನಲ್ಲಿ ಪಶ್ಚಿಮ ಘಟ್ಟ ವ್ಯಾಪ್ತಿಯ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ

ಕಸ್ತೂರಿ ರಂಗನ್ ವರದಿ ಜಾರಿ ವಿಚಾರ; ಬೆಂಗಳೂರಿನಲ್ಲಿ ಪಶ್ಚಿಮ ಘಟ್ಟ ವ್ಯಾಪ್ತಿಯ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ

- Advertisement -
- Advertisement -

ಬೆಂಗಳೂರು: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡುವ ಕುರಿತಂತೆ ಕಸ್ತೂರಿರಂಗನ್ ಸಮಿತಿ ವರದಿಯ ಪ್ರಮುಖ ಅಂಶಗಳ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಸಭೆ ನಡೆಯಿತು.

ವಿಧಾನಸೌಧದಲ್ಲಿ ಪಶ್ಚಿಮ ಘಟ್ಟದ ಭಾಗದ ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ‌ ಅರಣ್ಯ, ಜೀವಿ ಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಭೆ ನಡೆಯಿತು.ಕಸ್ತೂರಿ ರಂಗನ್ ಸಮಿತಿಯ ವರದಿಯ ಜಾರಿ ಕುರಿತು ರಾಜ್ಯ ಸರ್ಕಾರವು ಸೂಕ್ತ ಆಕ್ಷೇಪಣೆ ಸಲ್ಲಿಸುವಂತೆ ಸಭೆಯಲ್ಲಿ ಒತ್ತಾಯಿಸಲಾಗಿದೆ.

ಕಸ್ತೂರಿ‌ ರಂಗನ್ ವರದಿಯ ಶಿಫಾರಸುಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಆಗಸ್ಟ್ 2ರಂದು 6ನೇ ಅಧಿಸೂಚನೆ ಹೊರಡಿಸಿತ್ತು.ರಾಜ್ಯದ ನಿಲುವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ನಿಟ್ಟಿನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕಾರ್ಕಳ‌ ಶಾಸಕ ವಿ. ಸುನೀಲ್ ಕುಮಾರ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರು ಭಾಗವಹಿಸಿದ್ದರು.

- Advertisement -

Latest News

error: Content is protected !!