Thursday, March 28, 2024
Homeತಾಜಾ ಸುದ್ದಿರಾಜ್ಯದ 252 ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ಘೋಷಣೆ

ರಾಜ್ಯದ 252 ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯದ 252 ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ.  ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾಗಳಿಗೆ ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 30ಕ್ಕೆ ಫಲಿತಾಂಶ ಘೋಷಣಾಗಲಿದೆ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ. 2022ರ ಆಗಸ್ಟ್ ನಿಂದ 2022ರ ನವೆಂಬರ್ ವರೆಗೆ ಮುಕ್ತಾಯವಾಗಲಿರುವಂತ 203ರ ಗ್ರಾಮ ಪಂಚಾಯ್ತಿಗಳಿಗೆ ಹಾಗೂ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ 49 ಗ್ರಾಮ ಪಂಚಾಯ್ತಿಗಳಿಗೆ ಉಪ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.

ಅಂದಹಾಗೇ ಜಿಲ್ಲಾಧಿಕಾರಿಗಳು ದಿನಾಂಕ 13-10-2022ರಂದು ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಇನ್ನೂ ದಿನಾಂಕ 18-10-2022ರಿಂದ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನಾಮಪತ್ರಗಳ ಪರಿಶೀಲನೆ ದಿನಾಂಕ 19-10-2022ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ 21-10-2022 ಆಗಿದೆ.

ದಿನಾಂಕ 28-10-2022ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯಕತೆ ಇದ್ದರೇ ದಿನಾಂಕ 30-10-2022ರಂದು ನಡೆಸಲಾಗುತ್ತದೆ. ಮತಏಣಿಕೆ ದಿನಾಂಕ 31-10-2022ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ತಿಳಿಸಿದೆ.

- Advertisement -
spot_img

Latest News

error: Content is protected !!