Tuesday, May 14, 2024
Homeತಾಜಾ ಸುದ್ದಿಶಿರಾ ಮತ್ತು ರಾಜರಾಜೇಶ್ವರಿ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ

ಶಿರಾ ಮತ್ತು ರಾಜರಾಜೇಶ್ವರಿ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ

spot_img
- Advertisement -
- Advertisement -

ನವದೆಹಲಿ : ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವಂತ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ಅನರ್ಹತೆಯಿಂದ ತೆರವಾದಂತ ರಾಜರಾಜೇಶ್ವರಿ ಕ್ಷೇತ್ರಕ್ಕೆ ಇದೀಗ ಉಪ ಚುನಾವಣೆ ಘೋಷಣೆಯಾಗಿದೆ. ನವೆಂಬರ್ 3,2020ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 10, 2020ಕ್ಕೆ ಮತಏಣಿಕೆ ನಡೆಯಲಿದೆ.

ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದ್ದು, ದಿನಾಂಕ 09-10-2020ರಂದು ಚುನಾವಣಾ ಅಧಿಸೂಚನೆಯನ್ನು ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಿಗೆ ಘೋಷಣೆ ಮಾಡಲಾಗುತ್ತದೆ. ದಿನಾಂಕ 16-10-2020ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 

ದಿನಾಂಕ 17-10-2020ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ದಿನಾಂಕ 19-10-2020ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ದಿನಾಂಕ 03-11-2020ರಂದು ಮತದಾನ ನಡೆಯಲಿದೆ. ದಿನಾಂಕ 10-11-2020ರಂದು ಮತಏಣಿಕೆ ನಡೆಯಲಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -
spot_img

Latest News

error: Content is protected !!