Saturday, June 28, 2025
Homeಕರಾವಳಿಸುಳ್ಯದ ಈ ಗ್ರಾಮದಲ್ಲಿ ಪ್ರತ್ಯಕ್ಷವಾಗಿದೆ ಚುನಾವಣಾ ಬಹಿಷ್ಕಾರ ಬ್ಯಾನರ್

ಸುಳ್ಯದ ಈ ಗ್ರಾಮದಲ್ಲಿ ಪ್ರತ್ಯಕ್ಷವಾಗಿದೆ ಚುನಾವಣಾ ಬಹಿಷ್ಕಾರ ಬ್ಯಾನರ್

spot_img
- Advertisement -
- Advertisement -

ಬಾಳಿಲ: ಗ್ರಾಮ ಪಂಚಾಯತ್ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಕರಾವಳಿ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ ವ್ಯಾಪ್ತಿಯ ಹಲವು ಭಾಗಗಳಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಗಳು ಪ್ರತ್ಯಕ್ಷವಾಗುತ್ತಿದೆ. ಬಾಳಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ಆಳವಡಿಸುವ ಮೂಲಕ ಈ ಭಾರಿ ಚುನಾವಣೆ ಬಹಿಷ್ಕರಿಸಿದ್ಧಾರೆ.

ಬಾಳಿಲ 2ನೇ ವಾರ್ಡ್ ನಲ್ಲಿ ಕೆಲವು ವರುಷಗಳಿಂದ ನಮ್ಮ ವಾರ್ಡ್‍ನ ಪಂಚಾಯತ್ ಸದಸ್ಯರಿಂದ ಹಿಡಿದು ವಿಧಾನ ಸಭಾ ಸದಸದ್ಯವರೆಗೆ ನಮ್ಮ ಪ್ರಮುಖ ಬೇಡಿಕೆಗಳಾದ ರಸ್ತೆ, ಚರಂಡಿ, ಕುಡಿಯುವ ನೀರು, ದಾರಿದೀಪ ಇತ್ಯಾದಿ ಸಮಸ್ಯೆಗಳಿಗೆ ಸ್ಪಂದಿಸದೆ ಕೇವಲ ಭರವಸೆ ಮಾತ್ರ ನೀಡುತ್ತಿರುವ ಜನಪ್ರತಿನಿಧಿಗಳ ಧೋರಣೆಗೆ ಬೇಸತ್ತು ಮುಂದಿನ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಕೊಡೆಂಕಿರಿ,ಮರೆಂಗಾಲ, ಪಲ್ಲತ್ತಡ್ಕ ಮತ್ತು ಕಾಪುತ್ತಡ್ಕ ಗ್ರಾಮಸ್ಥರು ವ್ಯಾನರ್ ಅಳವಡಿಸಿದ್ದಾರೆ.

- Advertisement -
spot_img

Latest News

error: Content is protected !!