Tuesday, June 6, 2023
Homeತಾಜಾ ಸುದ್ದಿಮುಂದಿನ ವಾರ; ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ

ಮುಂದಿನ ವಾರ; ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ

- Advertisement -
- Advertisement -

ಬೆಂಗಳೂರು :  ಚುನಾವಣಾ ಆಯೋಗವು ಮುಂದಿನ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಚುನಾವಣೆ ನಡೆಸಲು ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದ್ದು, ಇತ್ತೀಚೆಗಷ್ಟೇ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ರಾಜ್ಯಕ್ಕೆ ಆಗಮಿಸಿ 3 ದಿನಗಳ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದೆ.

ಮುಂದಿನ ವಾರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಸಕ್ತ ರಾಜ್ಯ ಸರ್ಕಾರದ ಅವಧಿ ಮೇ. 24 ಕ್ಕೆ ಮುಕ್ತಾಯವಾಗುವ ಕಾರಣ 2018 ರ ವೇಳಾಪಟ್ಟಿಯಂತೆಯೇ ಈ ಬಾರಿಯೂ ಚುಣಾವಣೆ ನಡೆಯುವ ಸಾಧ್ಯತೆ ಇದೆ. ಕಳೆ ಬಾರಿ ಮೇ. 12 ರಂದು ಮತದಾನ ನಡೆದಿತ್ತು. ಹೀಗಾಗಿ ಏಪ್ರಿಲ್ ತಿಂಗಳ 2 ನೇ ವಾರದಲ್ಲಿ ಅಧಿಸೂಚನೆ ಹೊರಡಿಸಿ, ಮೇ ಮೊದಲ ವಾರದ ವೇಳೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲು ಚುನಾವಣೆ ‘ಆಯೋಗ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಮುಂದಿನ ವಾರ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಲಿದೆ ಎನ್ನಲಾಗಿದ್ದು, ಅಂದು ಚುನಾವಣೆಗೆ ಮಹೂರ್ತ ಫಿಕ್ಸ್ ಮಾಡಲಿದೆ ಎನ್ನಲಾಗಿದೆ.

- Advertisement -

Latest News

error: Content is protected !!