Wednesday, June 24, 2026
Homeತಾಜಾ ಸುದ್ದಿಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಣೆ

ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಣೆ

- Advertisement -
- Advertisement -

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣಾ ದಿನಾಂಕ ಘೋಷಣೆಯಾಗಿದೆ.

ಆಗಸ್ಟ್ 7 ಕ್ಕೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದ್ದು, ಸೆಪ್ಟೆಂಬರ್ 9ರಂದು ಮತದಾನ ನಡೆಯಲಿದೆ. ಆಗಸ್ಟ್ 22 ‌ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ

ಸೆಪ್ಟೆಂಬರ್ 9 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ತಡರಾತ್ರಿಯ ಒಳಗೆ ಫಲಿತಾಂಶ ಘೋಷಣೆಯಾಗಲಿದೆ.

ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಕಾರಣ ಸದ್ಯ ಉಪರಾಷ್ಟ್ರಪತಿ ಸ್ಥಾನ ತೆರವಾಗಿದೆ.

- Advertisement -

Latest News

error: Content is protected !!