Sunday, May 5, 2024
Homeತಾಜಾ ಸುದ್ದಿನಾಳೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ

ನಾಳೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ

spot_img
- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ.ಅಧ್ಯಕ್ಷ ಸ್ಥಾನಕ್ಕೆ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ ತರೂರ್ ಸ್ಫರ್ಧಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿಯೇ ಮತದಾನ ಮಾಡಲಿದ್ದಾರೆ.

ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಎರಡು ಮತದಾನ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ.ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಹಾಗೂ ಬಳ್ಳಾರಿಯಲ್ಲಿ ಸಂಗನಕಲ್ಲು ಭಾರತ್ ಜೋಡೋ ಪಾದಯಾತ್ರೆ ಕ್ಯಾಂಪ್ ನಲ್ಲಿ ಮತದಾನ ಕೇಂದ್ರ ಸ್ಥಾಪಿಸಲಾಗಿದೆ.

ರಾಹುಲ್ ಗಾಂಧಿ ಸೇರಿದಂತೆ 40 ಸದಸ್ಯರು ಸಂಗನಕಲ್ಲು ಕ್ಯಾಂಪ್ ನಲ್ಲಿ ಮತದಾನ ಮಾಡಲಿದ್ದು, ಕೆಪಿಸಿಸಿ ಕಚೇರಿಯಲ್ಲಿ 494 ಸದಸ್ಯರು ಮತ ಚಲಾವಣೆ ಮಾಡಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆ.ಎಚ್. ಮುನಿಯಪ್ಪ, ಎಂ ಬಿ ಪಾಟೀಲ್ ಸೇರಿದಂತೆ ಇತರರು ಕೆಪಿಸಿಸಿ ಕಚೇರಿಯಲ್ಲಿ ಮತದಾನ ಮಾಡಲಿದ್ದಾರೆ.ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದೆ.

- Advertisement -
spot_img

Latest News

error: Content is protected !!