Sunday, June 7, 2026
Homeತಾಜಾ ಸುದ್ದಿಕಾಂಗ್ರೆಸ್‌ ಅಧ್ಯಕ್ಷ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್‌ ಅಧ್ಯಕ್ಷ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

- Advertisement -
- Advertisement -

ದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ  ಮಲ್ಲಿಕಾರ್ಜುನ ಖರ್ಗೆ ಅವರು ಇಂದು(ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ  ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ . ಇದಕ್ಕಿಂತ ಮುನ್ನ ಶಶಿ  ತರೂರ್ ಮತ್ತು ಕೆಎನ್  ತ್ರಿಪಾಠಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದ 30 ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆಗೆ ಬೆಂಬಲ ಸೂಚಿಸಿದ್ದಾರೆ. ಎ.ಕೆ ಆಂಟನಿ, ಅಶೋಕ್ ಗೆಹ್ಲೋಟ್, ಅಂಬಿಕಾ ಸೋನಿ,ಮುಕುಲ್ ವಾಸ್ನಿಕ್, ಆನಂದ್ ಶರ್ಮಾ, ಅಭಿಷೇಕ್ ಸಿಂಘ್ವಿ,  ಅಜಯ್ ಮಾಕೇನ್, ಭುಪಿಂದರ್ ಎಸ್  ಹೂಡ,ದಿಗ್ವಿಜಯ್ ಸಿಂಗ್ , ತಾರೀಖ್ ಅಲ್ವರ್  ಖರ್ಗೆ ಅವರಿಗೆ  ಬೆಂಬಲ ಸೂಚಿಸಿದ್ದಾರೆ.

- Advertisement -

Latest News

error: Content is protected !!