Wednesday, June 24, 2026
HomeWorldಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಚುನಾವಣಾ ವೇಳಾಪಟ್ಟಿ ಪ್ರಕಟ

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಚುನಾವಣಾ ವೇಳಾಪಟ್ಟಿ ಪ್ರಕಟ

- Advertisement -
- Advertisement -

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಚುನಾವಣಾ ವೇಳಾಪಟ್ಟಿ ಶುಕ್ರವಾರ ಪ್ರಕಟಗೊಂಡಿದ್ದು, ಜ.19ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ.

ಜ.20ರಂದು ಹೊಸ ಅಧ್ಯಕ್ಷರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿಯ ರಾಷ್ಟ್ರೀಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಬಿಡುಗಡೆ ಮಾಡಿರುವ ಅಧಿಸೂಚನೆಯಂತೆ ಪ್ರಕ್ರಿಯೆಗಳು ಹೀಗಿವೆ: ಜನವರಿ 19ರಂದು ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಅದೇ ದಿನ ಸಂಜೆ 4ರಿಂದ 5 ಗಂಟೆಯವರೆಗೆ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸಂಜೆ 5ರಿಂದ 6 ಗಂಟೆಯವರೆಗೆ ಉಮೇದುವಾರಿಕೆ ಹಿಂಪಡೆಯಲು ಅವಕಾಶವಿದೆ.

ಇನ್ನು ಅಗತ್ಯವಿದ್ದರೆ ಜನವರಿ 20ರಂದು ಮತದಾನ ನಡೆಯಲಿದೆ, ಇಲ್ಲದಿದ್ದರೆ ಅಂದೇ ನೂತನ ಅಧ್ಯಕ್ಷರ ಘೋಷಣೆಯಾಗಲಿದೆ. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಇಡೀ ಚುನಾವಣಾ ಪ್ರಕ್ರಿಯೆ ನಡೆಯಲಿದೆ.

ಪಕ್ಷದ ಮೂಲಗಳ ಪ್ರಕಾರ, ಪ್ರಸ್ತುತ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿರುವ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಂಪೂರ್ಣ ಬೆಂಬಲ ನಬಿನ್ ಅವರಿಗಿದ್ದು, ಜೆ.ಪಿ. ನಡ್ಡಾ ಅವರ ಉತ್ತರಾಧಿಕಾರಿಯಾಗಿ ಅವರು ಪಕ್ಷದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತ ಎನ್ನಲಾಗಿದೆ.

- Advertisement -

Latest News

error: Content is protected !!