Monday, June 24, 2024
Homeತಾಜಾ ಸುದ್ದಿಪಂಚರಾಜ್ಯಗಳ ಚುನಾವಣೆ ವೇಳಾಪಟ್ಟಿ ಪ್ರಕಟ- ಫೆ.10 ರಿಂದ 7 ಹಂತಗಳಲ್ಲಿ ಮತದಾನ

ಪಂಚರಾಜ್ಯಗಳ ಚುನಾವಣೆ ವೇಳಾಪಟ್ಟಿ ಪ್ರಕಟ- ಫೆ.10 ರಿಂದ 7 ಹಂತಗಳಲ್ಲಿ ಮತದಾನ

spot_img
- Advertisement -
- Advertisement -

ನವದೆಹಲಿ: ಭಾರತದ ಚುನಾವಣಾ ಆಯೋಗವು ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಶನಿವಾರ, ಜನವರಿ 8 ರಂದು ಪ್ರಕಟಿಸಿದೆ. ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ದಿನಾಂಕಗಳನ್ನು ಪ್ರಕಟಿಸಿದ್ದಾರೆ.

ಅತೀ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಪಂಚರಾಜ್ಯಗಳಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಉತ್ತರ ಪ್ರದೇಶದಲ್ಲಿ ಫೆ10 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಪಂಚ ರಾಜ್ಯದ ಪೂರ್ಣ ಫಲಿತಾಂಶ ಪ್ರಕಟವಾಗಲಿದೆ. ತತ್ ಕ್ಷಣದಿಂದ ಚುನಾವಣಾ ನೀತಿ ಸಂಹಿತೆ ಪಂಚ ರಾಜ್ಯಗಳಲ್ಲಿ ಅನ್ವಯವಾಗಲಿದೆ.

ಪಂಜಾಬ್, ಉತ್ತರಾಖಂಡ ಮತ್ತು ಗೋವಾ ಫೆಬ್ರವರಿ 14 ರಂದು ಮತ್ತು ಮಣಿಪುರದಲ್ಲಿ ಫೆಬ್ರವರಿ 27 ಮತ್ತು 3 ರಂದು ಮತದಾನ ನಡೆಯಲಿದ್ದು ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ

ಒಟ್ಟಾರೆ 690 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದಲ್ಲಿ 403, ಪಂಜಾಬ್‌ನಲ್ಲಿ 117, ಉತ್ತರಾಖಂಡದಲ್ಲಿ 70, ಮಣಿಪುರದಲ್ಲಿ 60 ಮತ್ತು ಗೋವಾದಲ್ಲಿ 40 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಅಂಚೆ ಮತಪತ್ರ:
ಈ ಬಾರಿ ಕೇಂದ್ರ ಚುನಾವಣಾ ಆಯೋಗವು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಕೋವಿಡ್ 19 ರೋಗಿಗಳು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲು ಅವಕಾಶ ನೀಡಿದೆ.

ನೀತಿ ಸಂಹಿತೆ ಜಾರಿ:

ವೇಳಾಪಟ್ಟಿಗಳ ಪ್ರಕಟಣೆಯಾದ ಇಂದಿನಿಂದಲೇ ಮಾದರಿ ನೀತಿ ಸಂಹಿತೆ (MCC) ತಕ್ಷಣವೇ ಜಾರಿಗೆ ಬರುತ್ತದೆ. ಎಂಸಿಸಿ ಮಾರ್ಗಸೂಚಿಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿದೆ. ಈ ಮಾರ್ಗಸೂಚಿಗಳ ಯಾವುದೇ ಉಲ್ಲಂಘನೆಯನ್ನು ಕಟ್ಟುನಿಟ್ಟಾಗಿ ವ್ಯವಹರಿಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯಕ್ತ ಎಚ್ಚರಿಕೆ ನೀಡಿದ್ದಾರೆ.

- Advertisement -
spot_img

Latest News

error: Content is protected !!