- Advertisement -
![]()
- Advertisement -
ಮಂಗಳೂರು: ಮಂಗಳೂರು ನಗರದಲ್ಲಿ ಕಸ ಸಂಗ್ರಹಣೆಗೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಆಟೋಗಳ ಲೋಕಾರ್ಪಣೆ ನಡೆಯಿತು.
ಮಂಗಳೂರು ಮಹಾನಗರ ಪಾಲಿಕೆ ಮತ್ತು ಪ್ರಗತಿ ಆಟೋಮೊಬೈಲ್ಸ್ ಸಹಭಾಗಿತ್ವದಲ್ಲಿ ಎಲೆಕ್ಟ್ರಿಕ್ ಆಟೋಗಳನ್ನು ಕಾರ್ಯಾಚರಣೆಗೆ ಮುಕ್ತಗೊಳಿಸಲಾಗಿದೆ.
ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಮತ್ತು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸ್ವಚ್ಛ ಮಂಗಳೂರಿಗಾಗಿ ಒಟ್ಟು 48 ಲಕ್ಷ ರೂಪಾಯಿ ವೆಚ್ಚದಲ್ಲಿ 24 ಎಲೆಕ್ಟ್ರಿಕ್ ಚಾಲಿತ ಆಟೋಗಳನ್ನು ಲೋಕಾರ್ಪಣೆ ಮಾಡಲಾಗಿದೆ.
- Advertisement -


