- Advertisement -
- Advertisement -
ಮಡಿಕೇರಿ: ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ಐವರು ಗಾಯಗೊಂಡ ಘಟನೆ ವಿರಾಜಪೇಟೆಯಲ್ಲಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಡಿಜೆ ವಾಹನದ ಮೇಲಿದ್ದವರಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಅವಘಡ ಸಂಭವಿಸಿದೆ. ಗಾಯಗೊಂಡ ಹುಬ್ಬಳ್ಳಿ-ಧಾರವಾಡ ಮೂಲದ ಬಸವರಾಜು ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಮೂವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅವಘಡದಲ್ಲಿ ಓರ್ವನ ಬಟ್ಟೆಗೆ ಬೆಂಕಿ ಹೊತ್ತಿಕೊಂಡಿದ್ದು, ಇಬ್ಬರು ಸ್ಥಳದಲ್ಲೇ ಪ್ರಜ್ಞಾಹೀನರಾಗಿದ್ದರು. ಘಟನೆ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
- Advertisement -


