Friday, June 5, 2026
Homeಚಿಕ್ಕಮಗಳೂರುಚಿಕ್ಕಮಗಳೂರು; ದೇವರಮನೆಯಲ್ಲಿ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು

ಚಿಕ್ಕಮಗಳೂರು; ದೇವರಮನೆಯಲ್ಲಿ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು

- Advertisement -
- Advertisement -

ಚಿಕ್ಕಮಗಳೂರು; ದೇವರಮನೆಯಲ್ಲಿ ಕಾಡಾನೆಯೊಂದು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾದ ಘಟನೆ ಸೋಮವಾರ ಸಂಜೆ ನಡೆದಿದೆ.

ಮೂಡಿಗೆರೆ ಪಟ್ಟಣದ ನಿವಾಸಿ ಲೋಕೇಶ್ ಮತ್ತು ಅವರ ಸಹೋದರಿ ದೇವರಮನೆ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಿಂದಿರುವಾಗ ದೇವರಮನೆ ರಸ್ತೆಯಲ್ಲಿ ಕಾಡಾನೆ ಬೈಕಿಗೆ ಅಡ್ಡ ಬಂದು ಅಟ್ಟಿಸಿಕೊಂಡು ಬಂದಿದೆ. ತಕ್ಷಣ ಬೈಕ್ ಸವಾರರು ಓಡಿ ಹೋಗಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು  ಬೈಕ್ ಜಖಂಗೊಂಡಿದೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳಾದ ಅಭಿಜಿತ್, ಬಣಕಲ್ ಠಾಣಾ ಪಿಎಸ್‌ಐ ಎನ್.ಕೆ.ಓಮನಾ, ಪೊಲೀಸ್ ಸಿಬ್ಬಂದಿಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!