Wednesday, April 14, 2021
Home ಕರಾವಳಿ ಸುಬ್ರಮಣ್ಯದಲ್ಲಿ ಆನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು

ಸುಬ್ರಮಣ್ಯದಲ್ಲಿ ಆನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಸುಬ್ರಹ್ಮಣ್ಯ: ಆನೆ ದಾಳಿಯಿಂದಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕಲ್ಮಕಾರಿನಲ್ಲಿ ನಡೆದಿದೆ.


ಮೃತರನ್ನು ಕಲ್ಮಕಾರಿನ ಮೆಂಟೆಕಜೆ ಶಿವರಾಮ ಗೌಡ(80) ಎಂದು ಗುರುತಿಸಲಾಗಿದೆ. ಇವರ ಮನೆಯಿಂದ ಸುಮಾರು ಅರ್ಧ ಕಿಲೋ ಮೀಟರ್ ದೂರದ ಕಾಡಿನಲ್ಲಿ ನೀರಿನ ಪೈಪ್ ಸರಿಮಾಡಲೆಂದು ಹೋಗಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ.

ಪೈಪ್ ಸರಿ ಮಾಡಲು ಶಿವರಾಮ ಗೌಡರು ಹಿಂತಿರುಗಿ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದಾಗ ಆನೆ ದಾಳಿ ಮಾಡಿ ಇವರು ಗಾಯಗೊಂಡಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಇವರನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

- Advertisement -
- Advertisment -

Latest News

error: Content is protected !!