Friday, March 29, 2024
Homeಕರಾವಳಿಬೆಳ್ತಂಗಡಿಯ ಬಂಜಾರು ಮಲೆಯಲ್ಲಿ ಮತಗಟ್ಟೆ ಪರಿಶೀಲನೆಗೆ ತೆರಳುವಾಗ ಒಂಟಿ ಸಲಗ ಪ್ರತ್ಯಕ್ಷ

ಬೆಳ್ತಂಗಡಿಯ ಬಂಜಾರು ಮಲೆಯಲ್ಲಿ ಮತಗಟ್ಟೆ ಪರಿಶೀಲನೆಗೆ ತೆರಳುವಾಗ ಒಂಟಿ ಸಲಗ ಪ್ರತ್ಯಕ್ಷ

spot_img
- Advertisement -
- Advertisement -

ಬೆಳ್ತಂಗಡಿ:  ಬೆಳ್ತಂಗಡಿ ತಾಲೂಕಿನ ಬಂಜಾರು ಮಲೆ ಪ್ರದೇಶದ ಚುನಾವಣೆಯ ಮತಗಟ್ಟೆ ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ಒಂಟಿ ಸಲಗ ಪ್ರತ್ಯಕ್ಷವಾಗಿ ಆತಂಕ ಮೂಡಿಸಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕು ಕೇಂದ್ರದಿಂದ 35 ಕಿಮೀ ದೂರದಲ್ಲಿರುವ ಬಂಜಾರುಮಲೆ ಪ್ರದೇಶ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ, ಚಾರ್ಮಾಡಿ ಘಾಟಿಯ 9ನೇ ತಿರುವಿನಿಂದ ಸುಮಾರು 15 ಕಿ.ಮೀ. ಒಳ ಭಾಗದಲ್ಲಿದೆ. ಕಾಡಿನಿಂದ ಆವೃತ್ತವಾಗಿರುವ ಈ ಪ್ರದೇಶದಲ್ಲಿ ಸುಮಾರು 45 ಮನೆಗಳ 260ರಷ್ಟು ಮತದಾರರಿಗೆ ಬಂಜಾರುಮಲೆ ಸಮುದಾಯಭವನದಲ್ಲಿ ಮತಗಟ್ಟೆ ಸಂಖ್ಯೆ 86ರಲ್ಲಿ ಅವಕಾಶಮಾಡಿಕೊಡಲಾಗುತ್ತದೆ.

ಇದರ ಪರಿಶೀಲನೆಗಾಗಿ ಚುನಾವಣಾಧಿಕಾರಿ ರಘು, ಸಹಾಯಕ ಚುನಾವಣಾಧಿಕಾರಿ ಅಜಿತ್, ನೆರಿಯ ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹಾಗೂ ಸಿಬ್ಬಂದಿ ಬಾಡಿಗೆ ವಾಹನದಲ್ಲಿ ತೆರಳಿದ್ದರು.

ಮಧ್ಯಾಹ್ನ 1.35 ಕ್ಕೆ ವಾಪಾಸಾಗುತ್ತಿದ್ದಾಗ, ಏನೆಪೋಯ ವಿದ್ಯುತ್ ಘಟಕದ ಡ್ಯಾಂ ಬಳಿ ಒಂಟಿ ಸಲಗ ಎದುರಾಗಿದೆ.

ಒಂಟಿ ಸಲಗ ಕಂಡು ಸಮೀಪದ ಕಿರು ರಸ್ತೆಯಲ್ಲಿ ಚಾಲಕ ವಾಹನನ್ನು ತಿರುವು ಹಾಕಿದ್ದರು. ಸುಮಾರು 2.15ರಿಂದ 3.15 ರವರೆಗೆ ಆನೆ ಹಾದು ಹೋಗುವವರೆಗೆ ಸ್ಥಳದಲ್ಲೇ ಅಧಿಕಾರಿಗಳು ಉಳಿಯುವಂತಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಪಿಡಿಒ ಗಾಯತ್ರಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!