Wednesday, June 3, 2026
Homeಕರಾವಳಿಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಇಂದು ಸಂಜೆ ಕಾಡಾನೆ ಪ್ರತ್ಯಕ್ಷ

ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಇಂದು ಸಂಜೆ ಕಾಡಾನೆ ಪ್ರತ್ಯಕ್ಷ

- Advertisement -
- Advertisement -

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4.30 ಗಂಟೆ ವೇಳೆ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.  ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕಾಡಾನೆ ಪ್ರತ್ಯಕ್ಷವಾಗಿದೆ ಎನ್ನಲಾಗಿದೆ.

ರಸ್ತೆಯ ಬದಿಯಲ್ಲಿ ಕಾಡಾನೆ ಕಂಡು ಚಾಲಕ ಬಸ್ ನಿಲ್ಲಿಸಿದ್ದಾರೆ.ಬಸ್ ನ ಹಿಂದೆ ಹಲವು ವಾಹನಗಳು ಅರ್ಧ ಗಂಟೆಗೂ ಅಧಿಕ ಕಾಲ ಸಾಲುಗಟ್ಟಿ ನಿಂತಿದ್ದವು ಎನ್ನಲಾಗಿದೆ. ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವವರು ಮುಂಜಾಗ್ರತೆ ವಹಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ

- Advertisement -

Latest News

error: Content is protected !!