Friday, April 26, 2024
Homeತಾಜಾ ಸುದ್ದಿನಾಳೆ ಮೈಸೂರು ದಸರಾ ಗಜ ಪಯಣಕ್ಕೆ ಚಾಲನೆ

ನಾಳೆ ಮೈಸೂರು ದಸರಾ ಗಜ ಪಯಣಕ್ಕೆ ಚಾಲನೆ

spot_img
- Advertisement -
- Advertisement -

ಮೈಸೂರು: ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ನಾಳೆ ಗಜಪಯಣಕ್ಕೆ ಚಾಲನೆ ದೊರೆಯಲಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ನಾಳೆ ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಗಜಪಯಣಕ್ಕೆ ಚಾಲನೆ ದೊರೆಯಲಿದೆ.

ಆಗಸ್ಟ್ 10ರಂದು ಅರಮನೆಗೆ ಗಜಪಡೆಗಳ ಆಗಮನವಾಗಲಿದ್ದು, ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಗಳನ್ನು ಬರಮಾಡಿಕೊಳ್ಳಲಾಗುತ್ತದೆ. ಎರಡು ತಂಡಗಳಲ್ಲಿ 14 ಆನೆಗಳ‌ ಆಗಮನವಾಗಲಿದ್ದು, ಮೊದಲ ತಂಡದಲ್ಲಿ 9, ಎರಡನೇ ತಂಡದಲ್ಲಿ 5 ಆನೆಗಳು ಆಗಮಿಸಲಿವೆ.

ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ 3 ಆನೆಗಳನ್ನು ಕಳುಹಿಸಿಕೊಡಲಿದ್ದು ಉಳಿದ 11 ಆನೆಗಳು ಮೈಸೂರು ದಸರಾ ಮಹೋತ್ಸವದಲ್ಲಿ ಹೆಜ್ಜೆ ಹಾಕಲಿವೆ.ದಸರಾ ಮಹೋತ್ಸವ 2022ರ ಸಂಬಂಧ 16 ಸಮಿತಿಗಳನ್ನು ರಚಿಸಲಾಗಿದ್ದು, ದಸರಾ ಉದ್ಘಾಟಕರ ಆಯ್ಕೆಯನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿದೆ.

- Advertisement -
spot_img

Latest News

error: Content is protected !!