- Advertisement -


- Advertisement -
ಬೆಳ್ತಂಗಡಿ; ಇಲ್ಲಿನ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು.
ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ವೆಟ್ ಮಿಕ್ಸ್ ಹಾಕಿ ರಸ್ತೆ ದುರಸ್ತಿ ಕಾರ್ಯ ಕೈಗೊಂಡಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ. ಶಾಶ್ವತ ದುರಸ್ತಿ ಕಾಮಗಾರಿಯನ್ನೂ ಶೀಘ್ರದಲ್ಲೇ ಕೈಗೊಳ್ಳಲಾಗುವುದು.
- Advertisement -


