ಮೂಡುಬಿದಿರೆ: ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನಿಂದ ಕೊಡಮಾಡುವ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ʼಗೆ ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ನ ಚೇರ್ಮನ್ ಡಾ.ಎಂ.ಮೋಹನ್ ಆಳ್ವ ಅವರು ಭಾಜನರಾಗಿದ್ದಾರೆ.
ಪ್ರಶಸ್ತಿಯನ್ನು ಆ.23 ರಂದು ನಗರದ ಎ.ಜೆ.ಗ್ರ್ಯಾಂಟ್ ಹೋಟೆಲ್‌ನಲ್ಲಿ ನಡೆಯಲಿರುವ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ನೀಡಲಾಗುತ್ತಿದೆ. ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ಕಾರ್ಯಕ್ರಮವು ಬೆಳಗ್ಗೆ 11ಕ್ಕೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಮೋಹನ್ ಆಳ್ವರಿಗೆ ಪ್ರಶಸ್ತಿಯನ್ನು ಪ್ರದಾನಿಸಲಾಗುತ್ತಿದೆ.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಬಂಟ ಸಂಘದ ಸಾಧಕರಾದ ಹಿರಿಯ ಯಕ್ಷಗಾನ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಅವರಿಗೆ ದಿ.ಡಾ.ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಇಂದಿರಾ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ 24ನೇ ರ್ಯಾಂಕ್ ಪಡೆದ ಸಿಎ ನಿಶ್ಚಲ್ ರೈ ಅವರಿಗೆ ಸಿಎ ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಹಾಗೂ ಸಿಎ ರಕ್ಷಾ.ಆರ್. ಶೆಟ್ಟಿ ಅವರಿಗೆ ಸಿಎ ಗೋಪಾಲ್.ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ವಿತರಿಸಲಾಗುವುದೆಂದು ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


