Thursday, June 4, 2026
Homeಕರಾವಳಿಉಡುಪಿಮಣಿಪಾಲ: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ಮಣಿಪಾಲ: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

- Advertisement -
- Advertisement -

ಮಣಿಪಾಲ:ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರು ಇವತ್ತು ಪ್ರತಿಭಟನೆ ಹಮ್ಮಿಕೊಂಡರು. ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ನೇತ್ರತ್ವದಲ್ಲಿ ಇಂದು ಮಣಿಪಾಲ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರತಿಭಟನಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ.ತಕ್ಷಣ ಸರಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು. ಪ್ರತಿಭಟನೆ ಬಳಿಕ  ಅಪರ ಜಿಲ್ಲಾಧಿಕಾರಿ ಮುಖಾಂತರ ರಾಜ್ಯದ ಮುಖ್ಯಮಂತ್ರಿಯವರಿಗೆ, ಶಿಕ್ಷಣ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಜಯಶ್ರೀ ಬೈಂದೂರು ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

- Advertisement -

Latest News

error: Content is protected !!