Monday, April 29, 2024
Homeತಾಜಾ ಸುದ್ದಿಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಅಂತ್ಯ: ಇಂದು ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ

ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಅಂತ್ಯ: ಇಂದು ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ

spot_img
- Advertisement -
- Advertisement -

ಪಾಟ್ನಾ: ಮಹಾರಾಷ್ಟ್ರದಲ್ಲಿ ಬಿಜೆಪಿ- ಶಿವಸೇನೆ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಇದೀಗ ಬಿಹಾರದಲ್ಲಿ ಜೆಡಿಯು- ಬಿಜೆಪಿ ಮೈತ್ರಿ ಸರ್ಕಾರ ಪತನವಾಗುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಜೊತೆಗಿನ ಮೈತ್ರಿಯಿಂದ ದೂರ ಸರಿಯಲು ನಿರ್ಧರಿಸಿರುವ ಜೆಡಿಯು ಅಧ್ಯಕ್ಷ ನಿತೀಶ್‌ ಕುಮಾರ್ ವಿಪಕ್ಷಗಳ ಜೊತೆ ಸೇರಿ ಮಹಾಘಟಬಂಧನ್ ರಚನೆ ಮಾಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ತೇಜಸ್ವಿ ಯಾದವ್ ಅವರೊಂದಿಗೆ ರಾಜ್ಯಪಾಲರ ಭೇಟಿಗೆ ನಿತೀಶ್ ಕುಮಾರ್ ಇಂದು ಸಂಜೆ 4 ಗಂಟೆಗೆ ಸಮಯಾವಕಾಶ ಕೇಳಿರುವುದರಿಂದ ಈ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.

ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಹೀಗಾಗಿ, ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳಲು ನಿತೀಶ್ ಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಇತರ ಮಹಾಘಟಬಂಧನ್ ಘಟಕಗಳು ಇಂದು ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ನಿತೀಶ್ ಕುಮಾರ್ ಅವರು ಬಿಹಾರ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ. ಅಲ್ಲದೆ, ಅವರು ತೇಜಸ್ವಿ ಯಾದವ್ ಅವರೊಂದಿಗೆ ರಾಜಭವನಕ್ಕೆ ತೆರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!