Thursday, June 4, 2026
Homeತಾಜಾ ಸುದ್ದಿಇನ್ಮೇಲೆ ದೇಗುಲಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸಿಗಲಿದೆ ಶೀಘ್ರ ದರ್ಶನ

ಇನ್ಮೇಲೆ ದೇಗುಲಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸಿಗಲಿದೆ ಶೀಘ್ರ ದರ್ಶನ

- Advertisement -
- Advertisement -

ಬೆಂಗಳೂರು: ಇನ್ಮೇಲೆ ದೇಗುಲಗಳಲ್ಲಿ ಇನ್ನು ಮುಂದೆ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಶೀಘ್ರ ದರ್ಶನ ಸಿಗಲಿದೆ.ಹಿಂದೂ ಧಾರ್ಮಿಕ ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಎ ವರ್ಗ ಮತ್ತು ಬಿ ವರ್ಗದ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಈ ‌ಸೌಲಭ್ಯ ದೊರೆಯಲಿದ್ದು ಈ ಕುರಿತು ಧಾರ್ಮಿಕ ದತ್ತಿ‌ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.ದೇವಾಲಯಗಳಲ್ಲಿ ವಯಸ್ಸಿನ ದಾಖಲೆ ಅಥವಾ ಆಧಾರ್ ಕಾರ್ಡ್ ತೋರಿಸಿದಲ್ಲಿ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲು ಸೂಚಿಸಲಾಗಿದ್ದು, ದೇವಾಲಯಗಳಲ್ಲಿ ಸ್ಥಳಾವಕಾಶ ಇದ್ದಲ್ಲಿ ಪ್ರತ್ಯೇಕ ಸ್ಥಳ ಕಾಯ್ದಿರಿಸಲು ಸೂಚನೆ ನೀಡಲಾಗಿದೆ.

ಅಲ್ಲದೇ ದೇವಾಲಯಗಳಲ್ಲಿ ಹಿರಿಯ ನಾಗರಿಕರ ಸಹಾಯ ಕೇಂದ್ರ ಸ್ಥಾಪನೆಗೆ ಕೂಡಾ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.

- Advertisement -

Latest News

error: Content is protected !!