Friday, June 5, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎಇಇ ನೇಮಕ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎಇಇ ನೇಮಕ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಇಇ ಆಗಿ ಯೇಸುರಾಜ್ ಅಧಿಕಾರ ಸ್ವೀಕಾರದ ಕುರಿತಂತೆ ಉಂಟಾಗಿರುವ ಗೊಂದಲಕ್ಕೆ ಸಂಬಂಧಿಸಿದಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟೀಕರಣ ನೀಡಿದ್ದಾರೆ.

ಎಇಇ ಅಧಿಕಾರ ಸ್ವೀಕಾರ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆದಿತ್ತಲ್ಲದೇ ಯೇಸುರಾಜ್ ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್ ಎಂಬುದನ್ನು ಸರ್ಕಾರ ದೃಢೀಕರಿಸುವಂತೆ ವಿಶ್ವ ಹಿಂದೂ ಪರಿಷತ್ ನಿಂದ ಒತ್ತಾಯ ವ್ಯಕ್ತವಾಗಿತ್ತು.‌

ಗೊಂದಲದ ಬಗ್ಗೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಯೇಸುರಾಜ್ ಹಿಂದುಳಿದ ಜಾತಿಗೆ ಸೇರಿದವರು ಎಂದು ಶಾಲಾ ದಾಖಲೆ ಸಹಿತ ಸ್ಪಷ್ಟೀಕರಣ ನೀಡಿದ್ದಾರೆ.

ಅಲ್ಲದೇ, ಯೇಸುರಾಜ್ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರೆಂದು ಬಿಜೆಪಿ ಚುನಾವಣಾ ಸಮಯದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದೂ ಸಚಿವ ರಾಮಲಿಂಗಾರೆಡ್ಡಿ ಕಿಡಿ ಕಾರಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎಇಇ ಆಗಿ ಯೇಸುರಾಜ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತವಾಗಿತ್ತು.

- Advertisement -

Latest News

error: Content is protected !!