Thursday, June 4, 2026
Homeಕರಾವಳಿಉಡುಪಿರಾಜ್ಯದಲ್ಲಿ ಈ ಬಾರಿ ಲೋಡ್‌ ಶೆಡ್ಡಿಂಗ್‌ ಇಲ್ಲ ಎಂದು ಸ್ಪಷ್ಟಪಡಿಸಿದ ಇಂಧನ ಸಚಿವ ಸುನೀಲ್ ಕುಮಾರ್

ರಾಜ್ಯದಲ್ಲಿ ಈ ಬಾರಿ ಲೋಡ್‌ ಶೆಡ್ಡಿಂಗ್‌ ಇಲ್ಲ ಎಂದು ಸ್ಪಷ್ಟಪಡಿಸಿದ ಇಂಧನ ಸಚಿವ ಸುನೀಲ್ ಕುಮಾರ್

- Advertisement -
- Advertisement -

ಉಡುಪಿ: ರಾಜ್ಯದಲ್ಲಿ ಈ ಬಾರಿ ಲೋಡ್‌ ಶೆಡ್ಡಿಂಗ್‌ ಇಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.  ದೀಪಾವಳಿಗೂ ವಿದ್ಯುತ್‌ ವ್ಯತ್ಯಯ ಇರುವುದಿಲ್ಲ. ಬೇಸಿಗೆ ಸಮಯದಲ್ಲಿ ಗ್ರಾಹಕರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಲ್ಲಿ ಇತಿಹಾಸದಲ್ಲೇ ಅತೀ ಹೆಚ್ಚು ವಿದ್ಯುತ್‌ ಬೇಡಿಕೆ ಬಂದಿತ್ತು. ರಾಜ್ಯದಲ್ಲಿ ಸುಮಾರು 14800 ಮೆಗಾ ವ್ಯಾಟ್‌ ವಿದ್ಯುತ್‌ ನಿರ್ವಹಣೆ ಮಾಡಿದ್ದೇವೆ. ವರ್ಷದಲ್ಲಿ ಒಮ್ಮೆ ವಿದ್ಯುತ್‌ ದರ ಏರಿಕೆ ಮಾಡಲು ಮುಖ್ಯಮಂತ್ರಿಯವರಿಗೆ ಮನವಿ ನೀಡಲಾಗಿದೆ. ಮೂರು ತಿಂಗಳಿಗೊಮ್ಮೆ ವಿದ್ಯುತ್‌ ದರ ಏರಿಸಬಾರದು ಎಂದು ವಿನಂತಿಸಲಾಗಿದೆ ಎಂದರು.

- Advertisement -

Latest News

error: Content is protected !!