Thursday, June 4, 2026
Homeಕರಾವಳಿಮಂಗಳೂರುಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು; ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಬೀಬಿ ಅಲಾಬಿ ರಸ್ತೆಯ ಸರಕಾರಿ ಹಿಂದುಳಿದ ವರ್ಗದ ಹಾಸ್ಟೆಲ್ ನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಉಪ್ಪೂರು ಮೂಲದ ನಿತೇಶ್ ರಾವ್ (20) ಮೃತ ದುರ್ದೈವಿ.

ಎರಡನೇ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ನಿತೇಶ್, ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಫೇಲ್ ಆಗಿದ್ದ. ಇದರಿಂದ ಸ್ವಲ್ಪ ಖಿನ್ನತೆ ಒಳಗಾಗಿದ್ದ ಎನ್ನಲಾಗಿದೆ. ಅಲ್ಲದೇ ಇತರರೊಂದಿಗೆ ಬೆರೆಯದೇ ಒಬ್ಬಂಟಿಯಾಗಿರುತ್ತಿದ್ದ. ನಿನ್ನೆ ಬೆಳಗ್ಗೆ 10.30ರ ವೇಳೆಗೆ ಇತರ ವಿದ್ಯಾರ್ಥಿಗಳು ಹಾಸ್ಟೆಲ್ ಕಟ್ಟಡದ ಕೆಳಗಡೆ ಇದ್ದಾಗ ಈತ ಮೇಲ್ಭಾಗದ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಎರಡು ವರ್ಷಗಳಿಂದ ಮಂಗಳೂರಿನಲ್ಲಿದ್ದು ಓದುತ್ತಿದ್ದ ನಿತೇಶ್ ತಂದೆ ಐದು ವರ್ಷಗಳ ಹಿಂದೆ ತೀರಿಕೊಂಡಿದ್ದರು. ತಾಯಿ ಮತ್ತು ತಂಗಿಯನ್ನು ಅಗಲಿದ್ದಾನೆ. ಆತ್ಮಹತ್ಯೆಗೆ ಬೇರಾವುದೇ ಕಾರಣ ಇದೆಯೇ ಎನ್ನುವ ಬಗ್ಗೆ ಆತನ ಮೊಬೈಲನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಾಯಿ ನೀಡಿದ ದೂರಿನಂತೆ ಬಂದರು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!