Friday, June 5, 2026
Homeಕರಾವಳಿಪುತ್ತೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ನಿಧನ

ಪುತ್ತೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ನಿಧನ

- Advertisement -
- Advertisement -

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿರುವ  ಘಟನೆ ಮಾಡಾವಿನಲ್ಲಿ ನಡೆದಿದೆ.

ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಸಾವನ್ನಪ್ಪಿದ ವಿದ್ಯಾರ್ಥಿನಿ. ಮಾಡಾವು ನಿವಾಸಿ ಸಂಹಿತಾ ಅವರು ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದ ಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅವರಿಗೆ ಇಂದು ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!