Thursday, June 4, 2026
Homeತಾಜಾ ಸುದ್ದಿಬ್ರಿಟನ್‌: ಜೂನ್‌ 1ರ ವರೆಗೆ ಲಾಕ್‌ಡೌನ್‌ ಮುಂದುವರಿಕೆ!

ಬ್ರಿಟನ್‌: ಜೂನ್‌ 1ರ ವರೆಗೆ ಲಾಕ್‌ಡೌನ್‌ ಮುಂದುವರಿಕೆ!

- Advertisement -
- Advertisement -

ಲಂಡನ್ : ಜೂನ್ 1ರ ವರೆಗೆ ಇಂಗ್ಲೆಂಡ್ ನಲ್ಲಿ ಲಾಕ್ ಡೌನ್ ಮುಂದುವರಿಕೆ ಮಾಡಲಾಗುವುದು ಎಂದು ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

ಕೊರೋನಾ ಸೋಂಕು ತಡೆಗೆ ಬ್ರಿಟನ್ ದೇಶದೆಲ್ಲೆಡೆ ಜಾರಿ ಮಾಡಲಾಗಿದೆ. ಲಾಕ್ ಡೌನ್ ನಡುವೆಯೂ ಕೊರೋನಾ ಮಹಾಮಾರಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರೆಸಲು ತೀರ್ಮಾನಿಸಲಾಗಿದೆ. ಜೂನ್ 1 ರವರೆಗೆ ಲಾಕ್ ಡೌನ್ ದೊರೆಯಲಿದೆ. ಅಗತ್ಯ ವಸ್ತು ಮತ್ತು ಸೇವೆ ಹೊರತುಪಡಿಸಿ ಕಠಿಣ ನಿರ್ಬಂಧಗಳು ಜಾರಿಯಲ್ಲಿರುತ್ತದೆ ಎಂದು ಹೇಳಿದ್ದಾರೆ.

ಜೂನ್ 1 ರಿಂದ ಶಾಲೆ ಕಾಲೇಜು, ಅಂಗಡಿ ಮುಂಗಟ್ಟುಗಳು ಆರಂಭವಾಗಲಿದೆ. ಸೋಂಕಿನ ಪ್ರಮಾಣ ಕಡಿಮೆಯಾದರೆ ಲಾಕ್ಡೌನ್ ಹಂತಹಂತವಾಗಿ ಸಡಿಲಗೊಳಿಸಲಾಗುವುದು. ಸೋಂಕು ತಡೆಗಟ್ಟಲು ಜನರ ಸಹಕಾರ ಅಗತ್ಯ ಎಂದು ದೂರದರ್ಶನದಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಬೋರಿಸ್ ಜಾನ್ಸನ್ ಹೇಳಿದ್ದಾರೆ.
ಲಾಕ್ ಡೌನ್ ಜಾರಿಯಾದ 7 ವಾರಗಳ ನಂತರ ಬ್ರಿಟನ್ ನಲ್ಲಿ ಸುಮಾರು 31,800 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸ್ವತಃ ಪ್ರಧಾನಿಯವರೇ ಕೊರೋನಾ ಸೋಂಕಿತರಾಗಿ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ಲಾಕ್ ಡೌನ್ ಸಡಿಲಗೊಳಿಸುವ ಸಮಯ ಇದಲ್ಲ. ಷರತ್ತುಗಳೊಂದಿಗೆ ಹಂತಹಂತವಾಗಿ ಸಡಿಲ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!