Wednesday, June 3, 2026
Homeತಾಜಾ ಸುದ್ದಿಇಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಇಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

- Advertisement -
- Advertisement -

ಮೈಸೂರು: ಇಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.ಇಂದು ಮಹಿಷಾ ದಸರಾ ಆಚರಣಾ ಸಮಿತಿಯು ಮಹಿಷ ದರಸ ಆಚರಣೆಗೆ ಕರೆ ನೀಡಿತ್ತು. ಇಂದು ಬೆಳಿಗ್ಗೆ 10.30ಕ್ಕೆ ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ, ಪುರಭವನದ ಹೊರಾಂಗಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಗಿತ್ತು.

ಆದರೇ ಜಿಲ್ಲಾಡಳಿತ ಇದಕ್ಕೆ ಅವಕಾಶ ನೀಡದೇ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಚಲೋ ರದ್ದುಗೊಳಿಸಲಾಗಿದೆ. ಇದರ ನಡುವೆ ಚಾಮುಂಡಿ ತಾಯಿ ದರ್ಶನಕ್ಕೆ ಇಂದು ಭಕ್ತರಿಗೆ ನಿರ್ಬಂಧ ಕೂಡ ವಿಧಿಸಲಾಗಿದೆ.

ಚಾಮುಂಡಿ ತಪ್ಪಲಿನಲ್ಲಿ ನಿಷೇಧಾಜ್ಞೆ ಜಾರಿಗೊಂಡಿರುವ ಕಾರಣ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹೀಗಾಗಿ ಐವರು ಜನರಿಗಿಂತ ಹೆಚ್ಚು ಮಂದಿ ಗುಂಪು ಗೂಡುವುದು, ಸಭೆ, ಸಮಾರಂಭ ನಡೆಸುವುದು ನಿಷೇಧಿಸಲಾಗಿದೆ.

- Advertisement -

Latest News

error: Content is protected !!