Friday, May 10, 2024
Homeಕರಾವಳಿರಾಜ್ಯ ಬಿಜೆಪಿ ಕಳುಹಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ತಿರಸ್ಕರಿಸಿದ ಹೈಕಮಾಂಡ್: ಉದ್ಯಮಿ ಪ್ರಕಾಶ್ ಶೆಟ್ಟಿಗೂ ಇಲ್ಲ ಟಿಕೆಟ್...

ರಾಜ್ಯ ಬಿಜೆಪಿ ಕಳುಹಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ತಿರಸ್ಕರಿಸಿದ ಹೈಕಮಾಂಡ್: ಉದ್ಯಮಿ ಪ್ರಕಾಶ್ ಶೆಟ್ಟಿಗೂ ಇಲ್ಲ ಟಿಕೆಟ್ !

spot_img
- Advertisement -
- Advertisement -

ಬೆಂಗಳೂರು: ರಾಜ್ಯ ಬಿಜೆಪಿಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಮೂರು ಸಾಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ತಿರಸ್ಕರಿಸಿ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಇದು ‌ ರಾಜ್ಯ ನಾಯಕರು ಮತ್ತು ಕಾರ್ಯಕರ್ತರನ್ನು ಅಚ್ಚರಿಯಲ್ಲಿ ಕೆಡವಿದೆ.

ಈರಣ್ಣ ಕಡಾಡಿ ಮತ್ತು ಅಶೋಕ್‌ ಗಸ್ತಿ ರಾಜ್ಯಸಭೆ ಚುನಾವಣೆಗೆ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳಾಗಿದ್ದಾರೆ. ಇಬ್ಬರೂ ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿರುವುದು ವಿಶೇಷ. ಈ ಮೂಲಕ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶಗಳಿಗೆ ಆದ್ಯತೆ ನೀಡಿದೆ.

ರಾಜ್ಯಸಭಾ ಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಭಾರಿ ಪೈಪೋಟಿ ಕಂಡುಬಂದಿತ್ತು. ಸಹೋದರ ರಮೇಶ್ ಕತ್ತಿಯವರಿಗೆ ಟಿಕೆಟ್ ನೀಡಬೇಕೆಂದು ಶಾಸಕ ಉಮೇಶ್ ಕತ್ತಿಯವರು ಪಕ್ಷದ ನಾಯಕರ ಮೇಲೆ ಒತ್ತಡ ಹಾಕಿದ್ದರು. ಹಾಲಿ ರಾಜ್ಯಸಭಾ ಸಂಸದ ಪ್ರಭಾಕರ ಕೋರೆಯವರು ಕೂಡಾ ಪುನಾರಯ್ಕೆ ಬಯಸಿ ಟಿಕೆಟ್ ಆಕಾಂಕ್ಷೆ ಹೊಂದಿದ್ದರು.
ಕರಾವಳಿ ಕರ್ನಾಟಕದ ಹೋಟೆಲ್ ಉದ್ಯಮಿ ಕೆ ಪ್ರಕಾಶ್ ಶೆಟ್ಟಿಯವರ ಹೆಸರು ಕೂಡಾ ಕೊನೆಯ ಕ್ಷಣದಲ್ಲಿ ಕೇಳಿ ಬಂದಿತ್ತು. ರಾಜ್ಯ ಬಿಜೆಪಿ ಈ ಮೂವರ ಹೆಸರನ್ನೂ ಹೊಸದಿಲ್ಲಿಗೆ ಶಿಫಾರಸ್ಸು ಮಾಡಿತ್ತು.

ಈರಣ್ಣ ಕಡಾಡಿ ಬೆಳಗಾವಿ ಜಿಲ್ಲೆಯ ಗೋಕಾಕ್‌ ಮೂಲದವರು.. ಈ ಹಿಂದೆ ಬಿಜೆಪಿ ಬೆಳಗಾವಿ ಗ್ರಾಮೀಣ ಬಿಜೆಪಿ ಅಧ್ಯಕ್ಷ, ಬೆಳಗಾವಿ ಜಿಪಂ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ರಾಯಚೂರು ಜಿಲ್ಲೆಯ ಅಶೋಕ್ ಗಸ್ತಿ ಬಿಜೆಪಿ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿದ್ದ ಇವರು, ಸದ್ಯ ಬಳ್ಳಾರಿ ವಿಭಾಗದ ಪ್ರಭಾರಿಯಾಗಿದ್ದಾರೆ.

ಸದ್ಯ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿಜೆಪಿಯಿಂದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರು, ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆಯವರು, ಜೆಡಿಎಸ್ ನಿಂದ ಕಾಂಗ್ರೆಸ್ ಬೆಂಬಲದೊಂದಿಗೆ ಎಚ್ ಡಿ ದೇವೇಗೌಡ ಅವರು ಕಣದಲ್ಲಿದ್ದಾರೆ. ಜೂನ್ 19ರಂದು ಚುನಾವಣೆ ನಡೆಯಲಿದ್ದು, ಇವರೆಲ್ಲರ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ.

- Advertisement -
spot_img

Latest News

error: Content is protected !!