Thursday, June 4, 2026
Homeತಾಜಾ ಸುದ್ದಿಲೈಂಕಿಕ ದೌರ್ಜನ್ಯ ಆರೋಪ ಹಿನ್ನೆಲೆ: ಮುರುಘಾ ಮಠದ ಶ್ರೀಗಳು ಸೇರಿದಂತೆ‌ ಐವರು ಆರೋಪಿಗಳು ನಾಪತ್ತೆ ಆರೋಪ

ಲೈಂಕಿಕ ದೌರ್ಜನ್ಯ ಆರೋಪ ಹಿನ್ನೆಲೆ: ಮುರುಘಾ ಮಠದ ಶ್ರೀಗಳು ಸೇರಿದಂತೆ‌ ಐವರು ಆರೋಪಿಗಳು ನಾಪತ್ತೆ ಆರೋಪ

- Advertisement -
- Advertisement -

ಚಿತ್ರದುರ್ಗ: ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಸೇರಿದಂತೆ ಐವರ ವಿರುದ್ಧ
ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆ,  ಬಂಧನ ಭೀತಿಯಿಂದಾಗಿ ಮುರುಘಾ ಶ್ರೀ ಸೇರಿದಂತೆ ಐವರು ಆರೋಪಿಗಳು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಮೈಸೂರಿನಲ್ಲಿ ಒಡನಾಡಿ ಸಂಸ್ಥೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆರೋಪಿಸಿದಂತ ಆರೋಪದ ಮೇಲೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೂಲಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳು ಸೇರಿದಂತೆ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು.

ಈ ಪ್ರಕರಣವನ್ನು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಿಂದ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿತ್ತು. ಈ ಬೆನ್ನಲ್ಲೇ ಮುರುಘಾಶ್ರೀ ಸೇರಿದಂತೆ ಐವರು ಆರೋಪಿಗಳು ಬಂಧನದ ಭೀತಿಯಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!