Sunday, October 11, 2026
HomeUncategorizedಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು

ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು

- Advertisement -
- Advertisement -

ಸುಳ್ಯ; ಪಿಕ್‌ಅಪ್‌ ವಾಹನ ಮತ್ತು ಬೈಕ್ ನಡುವಿನ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಳ್ಯ ಮೂಲದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಬೇರಿಯ ನಿವಾಸಿ ಸುದೇಶ್(21) ಮೃತ ಯುವಕ.

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಪೊಡಿಯ ಮತ್ತು ವಿಮಲ ದಂಪತಿಯ ಪುತ್ರ ಸುದೇಶ್ ಕೆಲಸಕ್ಕೆಂದು ಹೋಗುತ್ತಿದ್ದಾಗ ಈಶ್ವರಮಂಗಲದಲ್ಲಿ ಪಿಕ್‌ಅಪ್‌ ವಾಹನ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.ಈ ವೇಳೆ ಸುದೇಶ್ ಗೆ ಗಂಭೀರ ಗಾಯಗಳಾಗಿತ್ತು. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!