Tuesday, July 1, 2025
Homeಕರಾವಳಿಮಂಗಳೂರು; ಮೈಕ್ ನಲ್ಲಿ  ಕೂಗಿದ್ರೆ ಮಾತ್ರನಾ ಅಲ್ಲಾನಿಗೆ ಕೇಳ್ಸೋದು? ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಮಂಗಳೂರು; ಮೈಕ್ ನಲ್ಲಿ  ಕೂಗಿದ್ರೆ ಮಾತ್ರನಾ ಅಲ್ಲಾನಿಗೆ ಕೇಳ್ಸೋದು? ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

spot_img
- Advertisement -
- Advertisement -

ಮಂಗಳೂರು: ಮೈಕ್ ನಲ್ಲಿ  ಕೂಗಿದ್ರೆ ಮಾತ್ರನಾ ಅಲ್ಲಾನಿಗೆ ಕೇಳ್ಸೋದು? ಎಂದು ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾವೂರಿನಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಈಶ್ವರಪ್ಪ ಭಾಷಣ ಮಾಡುವ ಮಧ್ಯೆ ಆರಂಭವಾದ ಆಝಾನ್‍ಗೆ ಎಲ್ಲಿ ಹೋದರೂ ನನಗೆ ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನಲ್ಲಿ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ. ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಅಂತಾ ಹೇಳಬೇಕಾಗುತ್ತದೆ ಎಂದು ಈಶ್ವರಪ್ಪ ನಾಲಗೆ ಹರಿಯಬಿಟ್ಟಿದ್ದಾರೆ.

- Advertisement -
spot_img

Latest News

error: Content is protected !!